Home ಟಾಪ್ ಸುದ್ದಿಗಳು ಅಲೋಪತಿ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಬಾಬಾ ರಾಮ್‌ ದೇವ್

ಅಲೋಪತಿ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಬಾಬಾ ರಾಮ್‌ ದೇವ್

ನವದೆಹಲಿ : ಅಲೋಪತಿ ಔಷಧಗಳ ಬಗ್ಗೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಗಳನ್ನು ಹಿಂಪಡೆಯುವುದಾಗಿ ಯೋಗ ಗುರು ಬಾಬಾ ರಾಮ್‌ ದೇವ್‌ ಹೇಳಿದ್ದಾರೆ. ಬಾಬಾ ರಾಮ್‌ ದೇವ್‌ ಹೇಳಿಕೆಗೆ ಐಎಂಎ ವಿರೋಧ ವ್ಯಕ್ತಪಡಿಸಿತ್ತು. ಈ ಸಂಬಂಧ ಭಾರತೀಯ ವೈದ್ಯಕೀಯ ಸಂಸ್ಥೆ ದೆಹಲಿಯ ದರಿಯಾಗಂಜ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿತ್ತು.

ವಿವಾದದ ಹಿನ್ನೆಲೆಯಲ್ಲಿ ರಾಮ್‌ ದೇವ್‌ ಅವರಿಗೆ ಪತ್ರ ಬರೆದಿದ್ದ ಆರೋಗ್ಯ ಸಚಿವ ಹರ್ಷವರ್ಧನ್‌, ನಿಮ್ಮ ಹೇಳಿಕೆಯು ಕೊರೊನ ವಾರಿಯರ್‌ ಗಳನ್ನು ಅವಮಾನಿಸುತ್ತಿದೆ. ದೇಶದ ಜನರ ಭಾವನೆಗಳನ್ನು ಘಾಸಿಗೊಳಿಸುತ್ತಿದೆ. ಇದು ಕೋವಿಡ್‌ ವಿರುದ್ಧದ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತದೆ ಎಂದಿದ್ದರು.

ಆರೋಗ್ಯ ಸಚಿವರ ಪತ್ರಕ್ಕೆ ಪ್ರತಿಕ್ರಿಯಿಸಿ ಟ್ವೀಟ್‌ ಮಾಡಿರುವ ರಾಮ್‌ ದೇವ್‌, “ಗೌರವಾನ್ವಿತ ಸಚಿವರೇ, ನಾನು ನಿಮ್ಮ ಪತ್ರವನ್ನು ಸ್ವೀಕರಿಸಿದ್ದೇನೆ. ಅಲೋಪತಿ ವೈದ್ಯಕೀಯ ಪದ್ಧತಿ ಕುರಿತ ಹೇಳಿಕೆಯನ್ನು ಹಿಂಪಡೆದುಕೊಳ್ಳುತ್ತೇನೆ” ಎಂದಿದ್ದಾರೆ.

Join Whatsapp
Exit mobile version