Home ಟಾಪ್ ಸುದ್ದಿಗಳು ದಾರಿತಪ್ಪಿಸುವ ಜಾಹೀರಾತು: ಸುಪ್ರೀಂಕೋರ್ಟ್ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್

ದಾರಿತಪ್ಪಿಸುವ ಜಾಹೀರಾತು: ಸುಪ್ರೀಂಕೋರ್ಟ್ ಮುಂದೆ ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್

ದೆಹಲಿ: ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದಿದ್ದಕ್ಕಾಗಿ ಯೋಗ ಗುರು ಬಾಬಾ ರಾಮದೇವ್ ಮಂಗಳವಾರ ಬೇಷರತ್ ಕ್ಷಮೆಯಾಚಿಸಿದ್ದಾರೆ.


ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಏಕೆ ಪ್ರಾರಂಭಿಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ ಕೆಲವು ದಿನಗಳ ನಂತರ ಬಾಬಾ ರಾಮ್ದೇವ್ ಮತ್ತು ಪತಂಜಲಿ ಆಯುರ್ವೇದ್ ನ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂಕೋರ್ಟ್ ಗೆ ಹಾಜರಾಗಿದ್ದಾರೆ.


ಮಾರ್ಚ್ 19 ರಂದು, ಪ್ರಕರಣದಲ್ಲಿ ನೀಡಲಾದ ನೋಟಿಸ್ ಗೆ ಕಂಪನಿಯು ಪ್ರತಿಕ್ರಿಯಿಸಲು ವಿಫಲವಾದ ಕಾರಣಕ್ಕೆ ವಿನಾಯಿತಿ ನೀಡಿದ ನಂತರ ಸುಪ್ರೀಂ ಕೋರ್ಟ್ ರಾಮ್ ದೇವ್ ಮತ್ತು ಬಾಲಕೃಷ್ಣ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು. ಪತಂಜಲಿ ನೀಡಿದ ಜಾಹೀರಾತುಗಳು ರಾಮ್ ದೇವ್ ಅವರ ಅನುಮೋದನೆಯನ್ನು ಪ್ರತಿಬಿಂಬಿಸುವುದರಿಂದ ಅವರಿಗೆ ಶೋಕಾಸ್ ನೋಟಿಸ್ ನೀಡುವುದು ಸೂಕ್ತವೆಂದು ಪರಿಗಣಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ರೋಗಗಳಿಗೆ ಚಿಕಿತ್ಸೆ ನೀಡುವ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸುವುದಿಲ್ಲ ಎಂಬ ತನ್ನ ಒಪ್ಪಂದವನ್ನು ಪಾಲಿಸದ ಕಂಪನಿಯನ್ನು ನ್ಯಾಯಾಲಯವು ತೀವ್ರವಾಗಿ ಟೀಕಿಸಿದೆ.

Join Whatsapp
Exit mobile version