ನರೇಂದ್ರ ಮೋದಿ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪೇನಿಲ್ಲ : ಬಾಬಾ ರಾಮದೇವ್

Prasthutha|

- Advertisement -

ಹೊಸದಿಲ್ಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಯುಗಪುರುಷ ಆದ್ದರಿಂದ ಮೊಟೆರಾ ಕ್ರಿಕೆಟ್ ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಹಿಂದಿನ ಕಾಲದ ಕಟ್ಟಡಗಳು ಮತ್ತು ಸ್ಮಾರಕಗಳನ್ನು ಆ ಕಾಲದ ಪ್ರಮುಖ ವ್ಯಕ್ತಿಗಳ ಹೆಸರು ಇಡಬಹುದಾದರೆ ಇಂದಿನ ಸ್ಮಾರಕಗಳು ಮತ್ತು ಕ್ರೀಡಾಂಗಣಗಳಿಗೆ ಈಗಿನ ಪ್ರಮುಖ ವ್ಯಕ್ತಿಗಳ ಹೆಸರಿಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಾಬಾ ರಾಮ್‌ದೇವ್ ಅಭಿಪ್ರಾಯಪಟ್ಟಿದ್ದಾರೆ. ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣವನ್ನು ‘ನರೇಂದ್ರ ಮೋದಿ ಕ್ರೀಡಾಂಗಣ’ ಎಂದು ಮರುನಾಮಕರಣ ಮಾಡಿರುವುದರ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

Join Whatsapp