ಬಾಬರಿ ಮಸೀದಿ ಧ್ವಂಸ ಪ್ರಕರಣ; ಅರ್ಜಿಯ ಅರ್ಹತೆ ಕುರಿತ ತೀರ್ಪು ಕಾಯ್ದಿರಿಸಿದ ಅಲಹಾಬಾದ್‌ ಹೈಕೋರ್ಟ್

Prasthutha|

ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣದ  32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಲಕ್ನೋ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯ ಅರ್ಹತೆ ಕುರಿತ ತೀರ್ಪನ್ನು  ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠ  ಕಾಯ್ದಿರಿಸಿದೆ.

- Advertisement -

ಬಿಜೆಪಿಯ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ  ಸಹಿತ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಅಯೋಧ್ಯೆ ನಿವಾಸಿಗಳಾದ ಹಾಜಿ ಮೆಹಬೂಬ್‌ ಮತ್ತು ಹಾಜಿ ಅಖ್ಲಾಕ್‌ ಅವರು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಲಕ್ನೋ ಹೈಕೋರ್ಟ್ ಗೆ ಸಲ್ಲಿಸಿದ್ದರು. 

- Advertisement -

ನ್ಯಾಯಮೂರ್ತಿಗಳಾದ ರಮೇಶ್‌ ಸಿನ್ಹಾ ಮತ್ತು ಸರೋಜ್‌ ಯಾದವ್‌ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಅರ್ಜಿಯ ಅರ್ಹತೆಯನ್ನು ಪರಿಶೀಲಿಸಿ ತೀರ್ಪು ಕಾಯ್ದಿರಿಸಿದೆ.

ವಿಶೇಷ ನ್ಯಾಯಾಲಯದ ತೀರ್ಪನ್ನು ಸಿಬಿಐ ಪ್ರಶ್ನಿಸದ ಕಾರಣ  ನಾವು ಹೈಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸಿದ್ದೇವೆ ಎಂದು   ಅರ್ಜಿದಾರರು ನ್ಯಾಯಪೀಠದ ಮುಂದೆ ಹೇಳಿದ್ದಾರೆ.



Join Whatsapp