ಡಿಸೆಂಬರ್ 6 : ಬಾಬರಿ ಮಸೀದಿ ಧ್ವಂಸ ದಿನ | ಮಥುರಾದಲ್ಲಿ ನಿಷೇಧಾಜ್ಞೆ ಜಾರಿ

Prasthutha|

ಮಥುರಾ : ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿ 29 ವರ್ಷವಾಗುತ್ತಿದ್ದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಥುರಾದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಅಯೋಧ್ಯೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಬಲಪಂಥೀಯ ಗುಂಪುಗಳಾದ ಅಖಿಲ ಭಾರತ ಹಿಂದೂ ಮಹಾಸಭಾ, ಶ್ರೀಕೃಷ್ಣ ಜನ್ಮಭೂಮಿ ನಿರ್ಮಾಣ ನ್ಯಾಸ್, ನಾರಾಯಣಿ ಸೇನೆ ಮತ್ತು ಶ್ರೀಕೃಷ್ಣ ಮುಕ್ತಿ ದಳಗಳು ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಕೋರಿದ್ದವು, ಆದರೆ ಮನವಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಾಹಲ್ ತಿರಸ್ಕರಿಸಿ, ಶಾಂತಿ ಕದಡುವ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದಿದ್ದಾರೆ.

ಕೃಷ್ಣನ ಜನ್ಮಸ್ಥಳ ಇಲ್ಲಿನ ಪ್ರಮುಖ ದೇವಾಲಯದ ಸಮೀಪವಿರುವ ಮಸೀದಿಯಲ್ಲಿದೆ ಎಂದು ಪ್ರತಿಪಾದಿಸಿರುವ ಹಿಂದುತ್ವ ಸಂಘಟನೆಗಳು ಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅನುಮತಿಯನ್ನು ಕೋರಿತ್ತು. ಆದರೆ ಇದಕ್ಕೆ ಅವಕಾಶ ನೀಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಥುರಾದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಮಥುರಾ ಪ್ರವೇಶ ಕೇಂದ್ರಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp
Exit mobile version