ಪಣಜಿ: ಇತ್ತೀಚೆಗೆ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರು ಗೋವಾದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಕರಾವಳಿ ನಿಯಂತ್ರಣ ವಲಯದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದನ್ವಯ ಗೋವಾದ ಕರ್ಲೀಸ್ ರೆಸ್ಟೋರೆಂಟ್ ಅನ್ನು ಕೆಡವದಂತೆ ಸುಪ್ರೀಮ್ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು, ಈ ಕಟ್ಟಡವನ್ನು ಉರುಳಿಸುವ ಆದೇಶವನ್ನು ತಡೆಹಿಡಿದಿದ್ದು, ಸೆಪ್ಟೆಂಬರ್ 16 ರಂದು ಈ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದೆ.
ಇದಕ್ಕೆ ಸಂಬಂಧಿಸಿದ ಫೋಟೋ ಮತ್ತು ವರದಿಗಳನ್ನು ಮುಂದಿನ ಬುಧವಾರದೊಳಗೆ ಸಮರ್ಪಿಸುವಂತೆ ಸುಪ್ರೀಮ್ ಕೋರ್ಟ್ ಪೀಠ, ಗೋವಾದ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.
ಹಸಿರು ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲಿ ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರವು ಈ ರೆಸ್ಟೋರೆಂಟ್ ಅನ್ನು ನೆಲಸಮಗೊಳಿಸುತ್ತಿದೆ.
ಖ್ಯಾತ ಟಿಕ್ ಟಾಕ್ ತಾರೆ, ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಸಾವಿನ ಬಳಿಕ ಕರ್ಲೀಸ್ ರೆಸ್ಟೋರೆಂಟ್ ಹೆಸರು ಚರ್ಚೆಗೆ ಗ್ರಾಸವಾಗಿದೆ.