ವಿಜಯ ಸಂಕಲ್ಪ ಯಾತ್ರೆಗೆ ಬಂದ ಜನರಿಗೆ ಹಣ‌ ಕೊಡದ ಹಿನ್ನೆಲೆ: ಬಿಜೆಪಿ ಬಾವುಟಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

Prasthutha|

ಮೈಸೂರು ; ವಿಜಯ ಸಂಕಲ್ಪ ಯಾತ್ರೆಗೆ ಬಂದ ಜನರಿಗೆ ಹಣ ಕೊಡದ ಹಿನ್ನೆಲೆ ಬಿಜೆಪಿ ಬಾವುಟಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್ ನಗರದಲ್ಲಿ ನಡೆದಿದೆ.

- Advertisement -

ಕೆ.ಆರ್ ನಗರದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದ ವಿಜಯ ಸಂಕಲ್ಪ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಮಾಜಿ ಸಿಎಂ ಸದಾನಂದ ಗೌಡ ಸೇರಿದಂತೆ ಕೆ.ಆರ್ ನಗರ ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ಯಾತ್ರೆಗೆ ಬಂದ ಜನರಿಗೆ ಆಯೋಜಕರು ಹಣ ನೀಡಿರಲಿಲ್ಲ.

80 ಬೈಕ್‌ ಗಳಿಗೆ ಪೆಟ್ರೋಲ್‌ ಗೆ ದುಡ್ಡು ಕೊಡಲಿಲ್ಲ ಎಂದು ರೊಚ್ಚಿಗೆದ್ದ ಕಾರ್ಯಕರ್ತರು ಬಿಜೆಪಿ ಬಾವುಟಕ್ಕೆ ಬೆಂಕಿ ಹಚ್ಚಿ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡರ ವಿರುದ್ಧ ಆಕ್ರೋಶ ಹೊರಹಾಕಿದರು.

Join Whatsapp