ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಪ್ರಾರ್ಥಿವ ಶರೀರದ ಮೆರವಣಿಗೆ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಜೆಪಿ ಮುಖಂಡರಿಂದ ಒತ್ತಡ ಹೆಚ್ಚಾಗುತ್ತಿದ್ದಂತೆ ವಿಟ್ಲ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿ.ಎಸ್.ಐ ಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ ಐ ಸುಹಾಸ್ ಅವರನ್ನು ಬೆಳ್ಳಾರೆ ಠಾಣೆಗೆ, ಚಿಕ್ಕಮಗಳೂರು ಯುಗಟಿ ಠಾಣೆಯ ಪಿಎಸ್ ಐ ಧನಂಜಯ ಡಿ. ಎಚ್.ಅವರನ್ನು ವಿಟ್ಲ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಆದೇಶ ನೀಡಿದ್ದಾರೆ.