ಬೆಂಗಳೂರು: ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಹುದ್ದೆಯಿಂದ ಅಬ್ದುಲ್ ಅಝೀಮ್ ಅವರ ನಾಮನಿರ್ದೇಶನವನ್ನು ಹಿಂಪಡೆದಿದ್ದ ರಾಜ್ಯ ಸರಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ನೋಟಿಸ್ ನೀಡದೆ ಏಕಪಕ್ಷೀಯವಾಗಿ ನಾಮ ನಿರ್ದೇಶನ ಹಿಂಪಡೆಯಲಾಗಿದೆ ಎಂದು ಸರಕಾರದ ಕ್ರಮವನ್ನು ಪ್ರಶ್ನಿಸಲು ಅವಕಾಶವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.
ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಸ್ಥಾನದ ನಾಮ ನಿರ್ದೇಶನ ಹಿಂಪಡೆದಿದ್ದ ಕ್ರಮವನ್ನು ಅಬ್ದುಲ್ ಅಝೀಮ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಪಸಂಖ್ಯಾಕ ಆಯೋಗದ ಸೆಕ್ಷನ್ 4ರ ಪ್ರಕಾರ ಆಯೋಗದ ಅಧ್ಯಕ್ಷರ ನೇಮಕ ಮತ್ತು ರದ್ದು ಮಾಡುವುದು ಸರಕಾರದ ವಿವೇಚನೆಗೆ ಒಳಪಟ್ಟಿದೆ. ಹಾಗಿರುವಾಗ ಅರ್ಜಿದಾರರ ಯಾವುದೇ ಹಕ್ಕನ್ನು ಕಸಿದುಕೊಂಡಂತಾಗುವುದಿಲ್ಲ ಎಂದು ನ್ಯಾಯಪೀಠ ತೀರ್ಪಿನಲ್ಲಿ ಹೇಳಿದೆ.