ಹಿಂದುಳಿದವರು, ಎಸ್ ಸಿ, ಅಲ್ಪಸಂಖ್ಯಾತರು ತಮ್ಮ ಹಕ್ಕುಗಳನ್ನು ಇನ್ನೂ ಅರ್ಥಮಾಡಿಕೊಂಡಿಲ್ಲ: ಓಂ ಪ್ರಕಾಶ್ ರಾಜ್ ಭರ್

Prasthutha|

ಲಕ್ನೋ: ಹಿಂದುಳಿದವರು, ಪರಿಶಿಷ್ಟ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ತಮ್ಮ ಹಕ್ಕುಗಳನ್ನು ಇನ್ನೂ ಅರ್ಥಮಾಡಿಕೊಂಡಿಲ್ಲ. ಈ ಎಲ್ಲ ಸಂಗತಿಗಳಿಂದಾಗಿ ನಾವು ಚುನಾವಣೆಯಲ್ಲಿ ನಿರೀಕ್ಷಿಸಿದ ಮಟ್ಟಕ್ಕೆ ತಲುಪಲಿಲ್ಲ ಎಂದು ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷದ (ಎಸ್ ಬಿಎಸ್ ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜ್ ಭರ್ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

ಇತ್ತೀಚಿನ ಯುಪಿ ಚುನಾವಣೆಯ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿ ಚುನಾವಣೆಯ ಸಂದರ್ಭದಲ್ಲಿ ನಮ್ಮ ಮೈತ್ರಿಕೂಟವು ರಾಜ್ಯದ 25 ಕೋಟಿ ಜನರಿಗೆ ಉಚಿತ ಶಿಕ್ಷಣ, ಉಚಿತ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಭರವಸೆಯನ್ನು ನೀಡಿತ್ತು. ಆದಾಗ್ಯೂ, ಶಿಕ್ಷಣ ಮತ್ತು ಉಚಿತ ವೈದ್ಯಕೀಯ ಚಿಕಿತ್ಸೆಯ ಮಹತ್ವವನ್ನು ಅರ್ಥಮಾಡಿಕೊಳ್ಳದ ದುರ್ಬಲ ವರ್ಗವು ನಮ್ಮನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಕೆಲವರು ಉಚಿತ ರೇಷನ್ ಮತ್ತು ಉಪ್ಪಿನ ಹೆಸರಿನಲ್ಲಿ ಮತ ಹಾಕಿದರೆ, ಇನ್ನು ಕೆಲವರು ಹಿಂದೂ-ಮುಸ್ಲಿಂ (ವಿಭಜನೆ) ಬಯಸುವವರು ಈ ಸಾಲಿನಲ್ಲಿ ಮತ ಹಾಕಿದರು. ಪರಿಶಿಷ್ಟ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ತಮ್ಮ ಹಕ್ಕುಗಳನ್ನು ಇನ್ನೂ ಅರ್ಥಮಾಡಿಕೊಂಡಿಲ್ಲ. ಈ ಎಲ್ಲ ಸಂಗತಿಗಳಿಂದ ನಾವು ಕಷ್ಟಪಡಬೇಕಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು



Join Whatsapp