ಬಿಜೆಪಿಗೆ ಸೇರ್ಪಡೆಗೊಂಡ ಬಡಗಕಜೆಕಾರ್ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯೆ

Prasthutha|

ಬಂಟ್ವಾಳ : ಬಡಗಕಜೆಕಾರು ಗ್ರಾಮ ಪಂಚಾಯತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯೆಯೊಬ್ಬರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

- Advertisement -

ಕಾಂಗ್ರೆಸ್ ಬೆಂಬಲಿತ ಸದಸ್ಯೆಯಾದ ರಾಜೀವಿ(ರಕ್ಷಿತಾ) ಪಕ್ಷತೊರೆದು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಇಂದು ತಮ್ಮ ನಿವಾಸದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಭಾರತೀಯ ಜನತಾ ಪಾರ್ಟಿಗೆ ರಾಜೀವಿ ಅವರನ್ನು ಬರಮಾಡಿಕೊಂಡರು.

- Advertisement -

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಉಪಾಧ್ಯಕ್ಷರಾದ ಚಿದಾನಂದ ಕಕ್ಯ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Join Whatsapp