ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

Prasthutha|

ಮಂಗಳೂರು: ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು. ಜತೆಗೆ ವಿದ್ಯಾರ್ಥಿಗಳ ಬ್ಯಾಗ್‌ ತೂಕವನ್ನು ಈಗ ಇರುವ ಭಾರಕ್ಕಿಂತ ಮೂರನೇ ಒಂದರಷ್ಟು ಕಡಿಮೆ ಮಾಡಲು ಚಿಂತಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವ ಅಭ್ಯಾಸವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬದಲು ಎಸ್‌ಇಪಿ ಜಾರಿಗೊಳಿಸಲಾಗುತ್ತಿದೆ ಎಂದರು.

2 ಸಾವಿರ ಕೆಪಿಎಸ್‌ ಆರಂಭ

- Advertisement -

ಪ್ರಸ್ತುತ ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್‌ ಸ್ಕೂಲ್‌(ಕೆಪಿಎಸ್‌)ಗಳಿದ್ದು, ಅವುಗಳನ್ನು 2 ಸಾವಿರಕ್ಕೆ ಏರಿಸಲಾಗುವುದು. ಪ್ರತೀ 2-3 ಗ್ರಾಪಂಗಳಿಗೆ ಒಂದು ಶಾಲೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಆರಂಭದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಿಂದ 3ರಷ್ಟು ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ವರ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ 3 ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಕಟ್ಟಿ, ಉತ್ತೀರ್ಣರಾಗಿ ಶಿಕ್ಷಣವನ್ನು ಮುಂದುವರಿಸಲು ಅನುಕೂಲವಾಗಿದೆ.

ಇದನ್ನು 10ನೇ ತರಗತಿಗೂ ವಿಸ್ತರಿಸಲಾಗುತ್ತದೆ. ಈ ವರ್ಷ ಬೋರ್ಡ್‌ ಪರೀಕ್ಷೆ ಬರೆದ 1.30 ಲಕ್ಷ ವಿದ್ಯಾರ್ಥಿಗಳ ಪೈಕಿ 42 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳ ಕಲಿಕೆಗೆ ಸ್ವಿಫ್ಟ್ ಚಾಟ್‌
ಸಪ್ಲಿಮೆಂಟರಿ (ಬೋರ್ಡ್‌) ಪರೀಕ್ಷೆ ಬರೆದು ಕಾಲೇಜು ಸೇರುವವರಿಗೆ ಬ್ರಿಜ್‌ ಕೋರ್ಸ್‌ ನೀಡುವಂತೆ ಉನ್ನತ ಶಿಕ್ಷಣ ಸಚಿವರಲ್ಲಿ ಕೋರಲಾಗಿದೆ ಎಂದರು.