ಬಾಗಲಕೋಟೆ | ಬಂದೂಕು ತರಬೇತಿ: ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

Prasthutha|

ಬಾಗಲಕೋಟೆ: ಶ್ರೀರಾಮಸೇನೆ ತನ್ನ ಕಾರ್ಯಕರ್ತರಿಗೆ ಅನಧಿಕೃತವಾಗಿ ಬಂದೂಕು ತರಬೇತಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯ 20ಕ್ಕೂ ಅಧಿಕ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

- Advertisement -

ನಿಂಗಪ್ಪ ಹೂಗಾರ ದೂರಿನ ಮೇರೆಗೆ ತರಬೇತಿಯಲ್ಲಿ ಭಾಗಿಯಾಗಿದ್ದ 27 ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧ ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ವೇ ನಂಬರ್ -17ರಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ವ್ಯಕ್ತಿತ್ವ ವಿಕಸನ ಶಿಬಿರ ಆಯೋಜಿಸಿ, ಅನುಮತಿ ಇಲ್ಲದೆ, ಅಕ್ರಮವಾಗಿ ಪ್ರವೇಶಿಸಿ, ಬಂದೂಕು ತರಬೇತಿ ನೀಡಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಜನರಿಗೆ ಆತಂಕ ಹುಟ್ಟಿಸುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಬಗ್ಗೆ ಬಿ.ಎನ್.ಎಸ್. ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಶ್ರೀರಾಮಸೇನೆಯು ಇತ್ತೀಚೆಗೆ ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ತನ್ನ ಕಾರ್ಯಕರ್ತರಿಗೆ ಆರು ದಿನಗಳ ಕಾಲ ಬಂದೂಕು ಮತ್ತು ಯುದ್ಧಕಲೆ ತರಬೇತಿ ನೀಡಿತ್ತು.



Join Whatsapp