ಕೇಸರಿಧಾರಿಗಳಿಂದ ಕಲ್ಲು ತೂರಾಟ ಪ್ರಕರಣ| ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

Prasthutha|

18 ಮಂದಿ ಬಂಧನ

- Advertisement -

ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೇಸರಿಧಾರಿಗಳು ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, 18 ಮಂದಿಯನ್ನು ಬಂಧನಕ್ಕೊಳಗಾಗಿದ್ದಾರೆ.

ಬನಹಟ್ಟಿಯ ಮಹಾತ್ಮಾ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿದ ಗುಂಪು ಘೋಷಣೆ ಕೂಗಿ ಕಲ್ಲು ತೂರಾಟ ನಡೆಸಿದ್ದು, ಕಾಲೇಜು ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

- Advertisement -

ಈ ವೇಳೆ ಪ್ರತಿಭಟನೆ ತೀವ್ರಗೊಂಡು ಕಲ್ಲು ತೂರಾಟ ಆರಂಭವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಪೊಲೀಸರು ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಲಾಠಿ ಪ್ರಹಾರ ನಡೆಸಿ ಸ್ಥಳದಲ್ಲಿದ್ದ ಜನರನ್ನು ಚದುರಿಸಿ ಪರಿಸ್ಥಿತಿ ಹತೋಟೆಗೆ ತಂದರು.

ಇನ್ನು ಘಟನೆ ಸಂಬಂಧ ಇದೀಗ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, 18 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Join Whatsapp