ಬಾಗಲಕೋಟೆ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ಕರ್ನಾಟಕದಿಂದ ತೆರಳಿದ್ದ ಪಾದಯಾತ್ರಿಗಳು ಹಾಗೂ ಸ್ಥಳೀಯ ವ್ಯಾಪಾರಸ್ಥರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಜಾನಮಟ್ಟಿ ನಿವಾಸಿ ಶ್ರೀಶೈಲ ವಾರಿಮಠ ಹತ್ಯೆ ನಡೆದಿದೆ.
ಘರ್ಷಣೆಯಲ್ಲಿ ಕರ್ನಾಟಕದಿಂದ ತೆರಳಿದ್ದ 200ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಲಾಗಿದೆ. ಪೊಲೀಸ್ ಬ್ಯಾರಿಕೇಡ್ ಗೆ ಬೆಂಕಿ ಹಚ್ಚಲಾಗಿದೆ. ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಲಾಗಿದೆ ಎಂದು ತಿಳಿದುಬಂದಿದೆ.
ಎಂಆರ್ ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಾಟ ಮಾಡುತ್ತಿರುವುದನ್ನು ಪಾದಯಾತ್ರಿಗಳು ಪ್ರಶ್ನಿಸಿದ್ದು ಜಗಳಕ್ಕೆ ಕಾರಣವಾಗಿದೆ. ಈ ವೇಳೆ ಎಳನೀರು ಕೊಚ್ಚುವ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ.