ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪಿಂಕಿ ಚೌಧರಿಗೆ ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.
ನಮ್ಮದು ತಾಲಿಬಾನ್ ದೇಶವಲ್ಲ. ಕಾನೂನಿನ ನಿಯಮವು ನಮ್ಮ ಬಹುತ್ವ ಮತ್ತು ಬಹು ಸಂಸ್ಕೃತಿಯ ಸಮಾಜದಲ್ಲಿ ಪವಿತ್ರ ಆಡಳಿತ ತತ್ವವಾಗಿದೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನಿಲ್ ಅಂತಿಲ್ ಹೇಳಿದರು. ಇಡೀ ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವಾಗ ಕೆಲವು ಮನಸ್ಸುಗಳು ಇನ್ನೂ ಅಸಹಿಷ್ಣುತೆ ಮತ್ತು ಧರ್ಮ ಕೇಂದ್ರಿತ ನಂಬಿಕೆಗಳಿಂದ ಬಂಧಿಸಲ್ಪಟ್ಟಿವೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಇತ್ತೀಚೆಗೆ ಪಿಂಕಿ ಚೌಧರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಜಂತರ್ ಮಂತರ್ ನಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿಯಾಗಿ ಘೋಷಣೆ ಕೂಗಿದ್ದರು.