ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಸದ್ಯ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆ ಸಾಧ್ಯತೆ ಇದೆ. ಆದರೆ, ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್ನಲ್ಲಿ ಮತ್ತೆ ಬಂಧನ ಸಾಧ್ಯತೆ ಇದೆ.