Home ಟಾಪ್ ಸುದ್ದಿಗಳು ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್​​ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಮೀನು ನೀಡಿ ಆದೇಶ ಹೊರಡಿಸಿದ್ದಾರೆ.

ಸದ್ಯ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆ ಸಾಧ್ಯತೆ ಇದೆ. ಆದರೆ, ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್​ನಲ್ಲಿ ಮತ್ತೆ ಬಂಧನ ಸಾಧ್ಯತೆ ಇದೆ.

Join Whatsapp
Exit mobile version