ಮಂಗಳೂರು: KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್‌ಗೆ ಜಾಮೀನು

Prasthutha|

ಮಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್ ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕದ ಮುರ ಗ್ರಾಮದ ಬಳಿ ಗುರುವಾರ(ಜೂ.22) ಯುವತಿಯೊಬ್ಬಳು ಕೆಎ 17 ಎಫ್ 1293 ನೋಂದಣಿ ಸಂಖ್ಯೆಯ ಉಪ್ಪಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತನ್ನ ತಾಯಿಯೊಂದಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುತ್ತೂರಿಗೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಯುವತಿಯ ಹಿಂದೆ ಕುಳಿತಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್ ತನ್ನ ಖಾಸಗಿ ಅಂಗವನ್ನು ಮುಟ್ಟಿದ್ದಾಗಿ ಯುವತಿ ದೂರು ನೀಡಿದ್ದರೆಂದು ಪೊಲೀಸರು ತಿಳಿಸಿದ್ದರು.