ಮುಸ್ಲಿಮರ ಚರ್ಮ ಸುಲಿಯಿರಿ ಎಂದವನಿಗೆ ಜಾಮೀನು ಮಂಜೂರು

Prasthutha|

ಜಮ್ಮು: ಮುಸ್ಲಿಮರು ಮತ್ತು ಕಾಶ್ಮೀರಿಗಳ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ವಿಕ್ರಮ್ ರಾಂಢವಾಗೆ ಜಮ್ಮು ಮತ್ತು ಕಾಶ್ಮೀರ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶ್ವನಿ ಕುಮಾರ್ ಶರ್ಮಾ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

- Advertisement -


ವಿಚಾರಣೆಗೆ ಹಾಜರಾಗಬೇಕು ಮತ್ತು ಪ್ರಕರಣದ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಎಂಬ ಷರತ್ತು ವಿಧಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶ್ವಿನಿ ಕುಮಾರ್ ಶರ್ಮಾ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.


ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 295-ಎ (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು) ಮತ್ತು 505 (ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ವಿಕ್ರಮ್ ರಾಂಢವಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

- Advertisement -


ಟಿ- 20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದ ಬಳಿಕ ಮುಸ್ಲಿಮರನ್ನು “ಜೀವಂತ ಚರ್ಮ ಸುಲಿಯಿರಿ” ಎಂದು ಕರೆದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿಕ್ರಮ್ ರಾಂಢವಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.



Join Whatsapp