ಅರ್ನಾಬ್ ಗೋಸ್ವಾಮಿಗೆ ಜೈಲೇ ಗತಿ! | ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್
Prasthutha: November 9, 2020

ಮುಂಬೈ : ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಬಂಧಿತನಾಗಿರುವ ‘ರಿಪಬ್ಲಿಕ್ ಟಿವಿ’ ಪ್ರಧಾನ ಸಂಪಾದಕ, ಬಿಜೆಪಿ ಬೆಂಬಲಿಗ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ, ನಾಲ್ಕು ದಿನಗಳಲ್ಲಿ ನಿರ್ಧರಿಸುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.
ಗೋಸ್ವಾಮಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್, ತೀರ್ಪು ಪ್ರಕಟಿಸಲು ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಮಯ ನಿಗದಿಪಡಿಸಿತ್ತು.
ಇಂಟಿರಿಯರ್ ಡಿಸೈನರ್ ಅನ್ವಯ್ ನಾಯ್ಕ್ ಮತ್ತು ಅವರ ತಾಯಿಯ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿ ನ.4ರಂದು ಗೋಸ್ವಾಮಿ ಬಂಧಿತನಾಗಿದ್ದಾನೆ. ಗೋಸ್ವಾಮಿಯನ್ನು ಕೋವಿಡ್ ಕ್ವಾರಂಟೈನ್ ಕೇಂದ್ರದ ಶಾಲೆಯೊಂದರಲ್ಲಿ ಇರಿಸಲಾಗಿತ್ತು. ಆದರೆ, ಅಲ್ಲಿ ನಿಯಮವನ್ನು ಉಲ್ಲಂಘಿಸಿ ಮೊಬೈಲ್ ಫೋನ್ ಬಳಕೆ ಮಾಡಿದುದರಿಂದ ಈಗ ಆತನನ್ನು ಜೈಲಿಗೆ ಕಳುಹಿಸಲಾಗಿದೆ.
