Home ಟಾಪ್ ಸುದ್ದಿಗಳು ಆರ್ಯನ್ ಖಾನ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಆರ್ಯನ್ ಖಾನ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಮುಂಬೈ: ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ನ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈನ ನ್ಯಾಯಾಲಯ ತಿರಸ್ಕರಿಸಿದೆ. 23 ವರ್ಷದ ಆರ್ಯನ್ ಪರ ಸತೀಶ್ ಮಾನೆಶಿಂಧೆ ವಾದಿಸಿದ್ದರು.


ಮುಂಬೈ ನ್ಯಾಯಾಲಯವು ಗುರುವಾರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಖಾನ್ ಅವರ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸುವಂತೆ ಕೋರಿ ಮಾದಕವಸ್ತುಗಳ ನಿಯಂತ್ರಣ ಕಾಯಿದೆ (ಎನ್ಸಿಬಿ) ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಮಧ್ಯೆ ಆರ್ಯನ್ ಗೆ ಜಾಮೀನು ಕೋರಿ ಮುಂಬೈ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇಂದು ಮಧ್ಯಾಹ್ನ ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.

Join Whatsapp
Exit mobile version