ಮಂಗಳೂರು: ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಮನೆಗೆ ಬಜರಂಗದಳ ಕಾರ್ಯಕರ್ತರಿಂದ ಮುತ್ತಿಗೆ ಯತ್ನ!

Prasthutha|

ಮಂಗಳೂರು: ಕೇಸರಿ ಶಾಲಿನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಗಿ ಆರೋಪಿಸಿ ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಅವರ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‌

- Advertisement -

ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವನ್ ಡಿಸೋಜಾ, “ಕೇಸರಿ ಶಾಲು ಹಾಕಿದವರು ಭಯೋತ್ಪಾದಕರು” ಎಂದು ಹೇಳಿದ್ದಾರೆ ಎನ್ನಲಾಗಿದ್ದು ಇದಕ್ಕೆ ಪ್ರತೀಕಾರ ತೀರಿಸಲು ಐವಾನ್ ಡಿಸೋಜ ಅವರ ವೆಲೆನ್ಸಿಯಾದ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

 ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು.‌ ಆದರೆ, ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹಲವು ಕಾರ್ಯಕರ್ತರನ್ನು ರಸ್ತೆಯಲ್ಲೇ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ.

- Advertisement -

ಪ್ರಕರಣ ಸಂಬಂಧಿಸಿ ಐವನ್ ಡಿಸೋಜಾ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.



Join Whatsapp