ಬಜ್ಪೆ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

Prasthutha|

ಬಜಪೆ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್‌ ಆರೋಪಿಗಳ ಬಂಧನವಾಗಿದೆ.

- Advertisement -

ಬಜಪೆ ಪೊಲೀಸ್‌ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ದರೋಡೆ ಮಾಡಲು ಸಂಚು ರೂಪಿಸಿದ ಕೇಸಿನಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ಸಮಯ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 62 ನೇ ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್‌ (31) ಮತ್ತು 2021ರಲ್ಲಿ ರಸ್ತೆ ಅಪಘಾತದಲ್ಲಿ ಓರ್ವ ಮೃತರಾಗಿದ್ದು, ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಬಂಧಿತರು.

ಬಜಪೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಸಂದೀಪ್‌ ಜಿ.ಎಸ್‌ ತಂಡ ತಲೆಮರೆಸಿಕೊಂಡಿದ್ದ ಈ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.



Join Whatsapp