ಗೋ ಹತ್ಯೆ ನೆಪದಲ್ಲಿ ಇಬ್ಬರು ಬುಡಕಟ್ಟು ವ್ಯಕ್ತಿಗಳನ್ನು ಗುಂಪುಹತ್ಯೆಗೈದ ಬಜರಂಗದಳ

Prasthutha|

ಸಿವನಿ (ಮಧ್ಯಪ್ರದೇಶ): ಗೋಹತ್ಯೆ ನೆಪದಲ್ಲಿ ಇಬ್ಬರು ಬುಡಕಟ್ಟು ವ್ಯಕ್ತಿಗಳನ್ನು ಬಜರಂಗ ದಳದ ಕಾರ್ಯಕರ್ತರು ಗುಂಪು ಹತ್ಯೆ ಮಾಡಿರುವ ಘಟನೆ ಇಲ್ಲಿನ ಸಿಮರಿಯಾ ಗ್ರಾಮದ ಕುರೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಗುಂಪಿನಿಂದ ಹಲ್ಲೆಗೊಳಗಾದ ಮರ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದಾಳಿ ನಡೆಸಿದವರು ಬಜರಂಗ ದಳದ ಕಾರ್ಯಕರ್ತರು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.

- Advertisement -

ಘಟನೆ ಸೋಮವಾರ ನಡೆದಿದ್ದು, ಈ ಸಂಬಂಧ 20 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇವರಲ್ಲಿ ಆರು ಮಂದಿಯ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

15ರಿಂದ 20 ಜನರಿದ್ದ ಗುಂಪು ಬುಡಕಟ್ಟು ವ್ಯಕ್ತಿಗಳ ಮನೆಗೆ ತೆರಳಿ ಹಲ್ಲೆ ನಡೆಸಿದೆ. ಇವರಲ್ಲಿ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ. ಮಠವಿ ತಿಳಿಸಿದ್ದಾರೆ.

‘ಗುಂಪು ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿದೆ. ತಡೆಯಲು ಹೋದಾಗ ನನ್ನ ಮೇಲೂ ಹಲ್ಲೆ ನಡೆಸಿದೆ ಎಂದು ಗಾಯಾಳು ಹಾಗೂ ದೂರುದಾರ ಬ್ರಜೇಶ್ ಬಟ್ಟ ತಿಳಿಸಿದ್ದಾರೆ.

ನ್ಯಾಯ ಒದಗಿಸಿಕೊಡುವಂತೆ ಬುಡಕಟ್ಟು ಜನರು ರಾಷ್ಟ್ರೀಯ ಹೆದ್ದಾರಿ 44 ಅನ್ನು ತಡೆದು ಪ್ರತಿಭಟನೆ ನಡೆಸಿದರು.



Join Whatsapp