ಮಂಗಳೂರು: ಬಿಜೆಪಿಯಿಂದ ಅಮಾನತುಗೊಂಡಿರುವ ವಕ್ತಾರೆ ನೂಪುರ್ ಶರ್ಮಾ , ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೂ.16ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಯಾರಿಗೂ ಅನುಮತಿ ನೀಡಿಲ್ಲ ಎಂದು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತರು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಿಗೆ ಬರೆದ ತಿಳುವಳಿಕೆ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.