ಬಜರಂಗ ದಳದ ಹರ್ಷ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

Prasthutha|

ಆರೋಪಿಗಳ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸರ ಬಗ್ಗೆ ವರದಿ ಕೇಳಿದ ಗೃಹ ಸಚಿವ

- Advertisement -

ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ  ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದೆ. ಈ ಬಗ್ಗೆ  ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

- Advertisement -

ಈ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.

Join Whatsapp