ಬಜರಂಗ ದಳದ ಹರ್ಷ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ ಆರೋಪಿಗಳ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸರ ಬಗ್ಗೆ ವರದಿ ಕೇಳಿದ ಗೃಹ ಸಚಿವ

Prasthutha|

ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ  ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದೆ. ಈ ಬಗ್ಗೆ  ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.

Join Whatsapp