ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

Prasthutha|

ಶಿವಮೊಗ್ಗ: ನಗರದಲ್ಲಿ ನಡೆದ ಗಲಭೆ ಪಕ್ಕದ ಭದ್ರಾವತಿಗೂ ವ್ಯಾಪಿಸಿದ್ದು, ಇಂದು ಬೆಳಿಗ್ಗೆ ಬಜರಂಗದಳದ ಕಾರ್ಯಕರ್ತನ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

- Advertisement -

ಭದ್ರಾವತಿಯ ನೆಹರು ನಗರದ ನಿವಾಸಿ, ಬಜರಂಗದಳದ ಕಾರ್ಯಕರ್ತ ಸುನೀಲ್ (25) ಎಂಬಾತನ ಮೇಲೆ ಬೆಳಗ್ಗೆ 8:30ರ ವೇಳೆಗೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಸುನೀಲ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯಲ್ಲೂ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಾಗಿದೆ. ನಿಷೇಧಾಜ್ಞೆ ನಡುವೆಯೂ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.



Join Whatsapp