ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ?

Prasthutha|

     

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ನೀಡುವ ಮುನ್ನ ತನ್ನ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡುವಂತೆ ಷರತ್ತು ವಿಧಿದ್ದರು ಎನ್ನಲಾಗಿದೆ.

ಬಾಲಚಂದ್ರ ಜಾರಕಿಹೊಳಿ ಅವರು ಸದ್ಯ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿ ಅಧ್ಯಕ್ಷರಾಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿರುವ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿಗೆ ನೀಡುವಂತೆ ಷರತ್ತು ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆ ಮುಗಿಯದೆ ಖಾತೆ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ.

- Advertisement -