ಮಾರ್ಚ್ 19ರಂದು ಬೆಂಗಳೂರಿನಲ್ಲಿ “ಇವಿಎಂ ನಿಷೇಧಿಸಿ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಿ” ಜಾಥಾ

Prasthutha|

ಬೆಂಗಳೂರು: ಇವಿಎಂ ನಿಷೇಧಿಸಿ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಿ ಅಭಿಯಾನದ ಪೂರ್ವಭಾವಿ ಸಭೆ ಬೆಂಗಳೂರಿನಲ್ಲಿ ಭಾನುವಾರ ನಡೆಯಿತು.

- Advertisement -


ಮಾರ್ಚ್ 19ರಂದು ಬೆಂಗಳೂರು ನಗರದಲ್ಲಿ ಬಹುಜನ ಮುಕ್ತಿ ಪಕ್ಷದ ವತಿಯಿಂದ EVM ವಿರುದ್ಧ ಬೃಹತ್ ಜಾಥಾ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.


ಬಹುಜನ ಮುಕ್ತಿ ಪಾರ್ಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಹುಲ್ ಮೆಕ್ರೆ ಅವರ ಅಧ್ಯಕ್ಷತೆಯಲ್ಲಿ ತೀರ್ಮಾನವನ್ನು ಮಾಡಲಾಯಿತು. ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಉದಯ್ ಕುಮಾರ್ ತಲ್ಲೂರು, ರಾಜ್ಯ ಕಾರ್ಯದರ್ಶಿ ಭಾನುಪ್ರಕಾಶ್, ರಾಜ್ಯ ಉಸ್ತುವಾರಿ ಅಝೀಝ್ ಹಾಗೂ ಇತರರು ಉಪಸ್ಥಿತರಿದ್ದರು.

Join Whatsapp