ಬೆದರಿಕೆಯೊಡ್ಡಿದ್ದ ಬಿಜೆಪಿ ಸಚಿವನಿಗೆ 48 ಗಂಟೆ ಪ್ರಚಾರಕ್ಕೆ ನಿಷೇಧ | ಬಿಜೆಪಿಗೆ ಮುಖಭಂಗ

Prasthutha: April 3, 2021

ಅಸ್ಸಾಂ: ಕಾಂಗ್ರೆಸ್‌ನ ಮೈತ್ರಿಕೂಟ ಪಕ್ಷಕ್ಕೆ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆಯೆಲ್ಲಿ ರಾಜ್ಯ ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರಿಗೆ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಅಸ್ಸಾಂ ಚುನಾವಣಾ ಆಯೋಗ ನಿಷೇಧ ಹೇರಿ ಆದೇಶ ಹೊರಡಿಸಿರುವುದು ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.

“ಹಗ್ರಾಮ ಮೊಹಿಲರಿ ಉಗ್ರವಾದ ಚಟುವಟಿಕೆಯಲ್ಲಿ ತೊಡಗಿದರೆ ಆತ ಜೈಲಿಗೆ ಹೋಗುತ್ತಾನೆ. ಇದು ನೇರವಾದ ಮಾತು. ಈಗಾಗಲೇ ಸಾಕಷ್ಟು ಪುರಾವೆಗಳು ದೊರೆತಿವೆ. ಈ ಪ್ರಕರಣವನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಗೆ ನೀಡಲಾಗುತ್ತಿದೆ. ಕೊಕ್ರಜಹಾರ್ ನಲ್ಲಿ ಕಾರಿನೊಳಗೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣವನ್ನು ಎನ್ಐಎಗೆ ನೀಡಲಾಗುತ್ತಿದೆ. ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದಲ್ಲಿ ಹಗ್ರಾಮ ಸಹಿತ ಯಾರಿಗೂ ಅಶಾಂತಿ ಸೃಷ್ಟಿಸಲು ಅವಕಾಶ ನೀಡುವುದಿಲ್ಲ” ಎಂದು ಶರ್ಮಾ ಹೇಳಿದ್ದರು. ಕಾಂಗ್ರೆಸ್ ನೀಡಿದ ದೂರಿನ ಮೇರೆಗೆ ಚುನಾವಣಾ ಆಯೋಗ ಶುಕ್ರವಾರ ತಡರಾತ್ರಿ ತನ್ನ ಆದೇಶ ಹೊರಡಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಹೆಸರನ್ನು ದುರುಪಯೋಗಪಡಿಸಿಕೊಂಡು ಹಗ್ರಾಮ ಮೊಹಿಲರಿ ಅವರನ್ನು ಜೈಲಿಗೆ ಕಳುಹಿಸುವುದಾಗಿ ಶರ್ಮಾ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ದೂರಿದೆ. ಹಗ್ರಾಮ ಮೊಹಿಲರಿ ನೇತೃತ್ವದ ಬಿಪಿಎಫ್ (ಬೋಡೊಲ್ಯಾಂಡ್ ಪೀಪಲ್ಸ್ ಫ್ರಂಟ್) ವಿರೋಧ ಪಕ್ಷದ ಮೈತ್ರಿಕೂಟದಲ್ಲಿದೆ.

ಗುರುವಾರ ಚುನಾವಣಾ ಆಯೋಗವು ಶರ್ಮಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಅದಕ್ಕೆ ಅವರು ಇಂದು ಉತ್ತರಿಸಿದ್ದಾರೆ. ಅವರ ವಿವರಣೆ ತೃಪ್ತಿಕರವಾಗಿಲ್ಲ ಎಂದು ಪರಿಗಣಿಸಲಾಗಿದೆ. ಮಾರ್ಚ್ 28 ರಂದು ತನ್ನ ಭಾಷಣದಲ್ಲಿ ಶರ್ಮಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಮಂಗಳವಾರ ನಡೆಯಲಿರುವ ಮೂರನೇ ಮತ್ತು ಅಂತಿಮ ಹಂತದ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಈ ಕ್ರಮ ಕೈಗೊಂಡಿದೆ. ಜೊತೆಗೆ ಚುನಾವಣಾ ಆಯೋಗವು ಅವರ ಸಹೋದರ ಮತ್ತು ಗೋಲ್ಪಾರ ಪೊಲೀಸ್ ವರಿಷ್ಠಾಧಿಕಾರಿ ಸುಶಾಂತ ಬಿಸ್ವಾ ಶರ್ಮಾ ಅವರನ್ನು ಜಿಲ್ಲೆಯಿಂದ ವರ್ಗಾಯಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!