ನಾವು ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು : ಸಿದ್ದರಾಮಯ್ಯ

Prasthutha|

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿದ ಮತಾಂತರ ನಿಷೇಧ ಕಾಯ್ದೆ’ ಯನ್ನು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

- Advertisement -

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ” ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿಯನ್ನು ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದಾಗ ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ” ಎಂದು ಆಶ್ವಾಸನೆ ನೀಡಿದ್ದಾರೆ.

ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?” ಎಂದು ಹೇಳಿದ್ದಾರೆ

Join Whatsapp