ಮೋದಿ ಕುರಿತ ಸಾಕ್ಷ್ಯಚಿತ್ರಕ್ಕೆ ನಿರ್ಬಂಧ| ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್

Prasthutha|

ಹೊಸದಿಲ್ಲಿ: 2002ರ ಗುಜರಾತ್ ಗಲಭೆಗೆ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ನೇರ ಹೊಣೆ ಎಂದು ಉಲ್ಲೇಖಿಸಿ ಬಿಬಿಸಿ ನಿರ್ಮಿಸಿದ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.

- Advertisement -

ವಕೀಲ ಎಂ.ಎಲ್. ಶರ್ಮಾ ಎಂಬವರು ಪಿಐಎಲ್ ಸಲ್ಲಿಸಿದ್ದು, “ಬಿಬಿಸಿ ಸಾಕ್ಷ್ಯಚಿತ್ರದ ಭಾಗ1 ಮತ್ತು 2 ಅನ್ನು ಪರಿಶೀಲಿಸಿ, ಗುಜರಾತ್ ಗಲಭೆಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಭಾಗಿಯಾದ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.
ಜತೆಗೆ, ಸಾಕ್ಷ್ಯಚಿತ್ರವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದು ಮಾಡುವಂತೆಯೂ ಕೋರಿದ್ದಾರೆ.

Join Whatsapp