Home ಟಾಪ್ ಸುದ್ದಿಗಳು ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಅತ್ತಿಬೆಲೆ ಪಟಾಕಿ ದುರಂತ ಸಂಬಂಧ ನಡೆದ ಸಭೆಯ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿದ್ದರಾಮಯ್ಯ, ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಮಾಲೀನ್ಯಕಾರ ಪಟಾಕಿಗೆ ಸಿಡಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವಂತೆ ಸೂಚಿಸಲಾಗಿದೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಸಮೀಪವೇ ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುತ್ತಿದ್ದೇವೆ ಎಂದರು.

Join Whatsapp
Exit mobile version