Home ಕರಾವಳಿ ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆಗೆ 2 ತಿಂಗಳು ನಿಷೇಧ

ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆಗೆ 2 ತಿಂಗಳು ನಿಷೇಧ

ಉಡುಪಿ: ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್‌ಬೋರ್ಡ್‌ ಯಂತ್ರ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನು ಗಾರಿಕೆಯನ್ನು ಜೂನ್‌ 1ರಿಂದ ಜುಲೈ 31ರ ವರೆಗೆ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಬಳಸಲು ಹಾಗೂ ನಾಡದೋಣಿಗಳ ಮೂಲಕ ಮೀನುಗಾರಿಕೆಗೆ ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ದಂಡನೆಗಳಿಗೆ ಹೊಣೆಯಾಗಬೇಕಾಗುತ್ತದೆ. ಅಲ್ಲದೆ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version