ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಸೇರಲು ನಿಷೇಧ ರದ್ದು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

Prasthutha|

ನವದೆಹಲಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಸದಸ್ಯತ್ವ ಪಡೆಯಲು ಹೇರಲಾಗಿದ್ದ ನಿಷೇಧವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

- Advertisement -

‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರಿ ನೌಕರರನ್ನು ಸಿದ್ಧಾಂತದ ಆಧಾರದ ಮೇಲೆ ವಿಭಜಿಸುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಇದು ಸಾರ್ವಜನಿಕ ಸೇವಕರು ತಟಸ್ಥ ನಿಲುವಿನೊಂದಿಗೆ ಕೆಲಸ ಮಾಡುವುದಕ್ಕೆ ಸವಾಲೊಡ್ಡುತ್ತದೆ ಎಂದು ಹೇಳಿದ್ದಾರೆ.

ದೇಶವು 1947ರಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಂಡಾಗ ಆರ್‌ಎಸ್‌ಎಸ್‌ ವಿರೋಧಿಸಿತ್ತು. ಆಗ ಸರ್ದಾರ್‌ ವಲ್ಲಭಭಾಯಿ ಪಟೇಲರು ಆರ್‌ಎಸ್‌ಎಸ್‌ಗೆ ಎಚ್ಚರಿಕೆ ನೀಡಿದ್ದರು. 1948ರ ಫೆಬ್ರುವರಿ 4ರಂದು ಗಾಂಧೀಜಿ ಅವರ ಹತ್ಯೆಯಾದ ಬಳಿಕ ಪಟೇಲರು ಆರ್‌ಎಸ್‌ಎಸ್‌ ಅನ್ನು ನಿಷೇಧಿಸಿದ್ದರು. 1966ರಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸರ್ಕಾರಿ ನೌಕರರ ವಿರುದ್ಧ ಹೇರಲಾಗಿದ್ದ ನಿಷೇಧವನ್ನು, 58 ವರ್ಷಗಳ ಬಳಿಕ ಮೋದಿ ಅವರು ತೆರವುಗೊಳಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

- Advertisement -

ಸಾಂವಿಧಾನಿಕ ಮತ್ತು ಸ್ವಾಯತ್ತ ಸಂಸ್ಥೆಗಳನ್ನು ಸಾಂಸ್ಥಿಕವಾಗಿ ಸ್ವಾಧೀನಪಡಿಸಿಕೊಳ್ಳಲು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಹೇಗೆ ಕೆಲಸ ಮಾಡುತ್ತಿವೆ ಎಂಬುದು ತಿಳಿದಿದೆ. ಇದೀಗ ಮೋದಿ ಅವರು ಸರ್ಕಾರಿ ಕಚೇರಿಗಳನ್ನು ರಾಜಕೀಯಗೊಳಿಸಿದ್ದಾರೆಡ ಮತ್ತು ನೌಕರರು ಒಂದು ಸಿದ್ಧಾಂತರ ಪರವಾಗಿ ಇರುವಂತೆ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಆರ್‌ಎಸ್‌ಎಸ್‌ ವಿರುದ್ಧ ಹೇರಲಾಗಿದ್ದ ನಿಷೇಧವನ್ನು ಹಿಂಪಡೆಯುವ ಸಂದರ್ಭದಲ್ಲಿ, ತಾನು ಭಾರತದ ಸಂವಿಧಾನಕ್ಕೆ ಅನುಗುಣವಾಗಿ, ಸಾಮಾಜಿಕ ಸಂಘಟನೆಯಾಗಿ ಮುಂದುವರಿಯುತ್ತೇನೆ. ರಾಜಕೀಯ ಉದ್ದೇಶ ಹೊಂದಿರುವುದಿಲ್ಲ ಎಂದು ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರಿಗೆ ಭರವಸೆ ನೀಡಿ, ಕ್ಷಮೆ ಕೋರಿತ್ತು. ಸರ್ಕಾರ ಈಗ ಕೈಗೊಂಡಿರುವ ಕ್ರಮವು ಅದರ ಉಲ್ಲಂಘನೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.



Join Whatsapp