Home ಟಾಪ್ ಸುದ್ದಿಗಳು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ನಿಷೇಧ: ನನಗೆ ಗೊತ್ತೇ ಇರಲಿಲ್ಲ ಎಂದ ಸಿಎಂ ಬೊಮ್ಮಾಯಿ

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ನಿಷೇಧ: ನನಗೆ ಗೊತ್ತೇ ಇರಲಿಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗೊತ್ತೇ ಇರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಲ್ಟಾ ಹೊಡೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದೇಶದ ನನ್ನ ಗಮನಕ್ಕೇ ಬಂದಿರಲಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡುವುದರ ಕುರಿತು ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

  ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ’ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಕೆಲವು ಸರ್ಕಾರಿ ನೌಕರರು ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಕೊಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿರಬಹುದು ಎಂದು ಸಮಜಾಯಿಷಿ ನೀಡಿದರು.

Join Whatsapp
Exit mobile version