ಕರ್ನಾಟಕದಿಂದ ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಕೆ.ವೆಂಕಟೇಶ್

Prasthutha|

ಮೈಸೂರು: ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ ಹೇಳಿದ್ದಾರೆ.

- Advertisement -


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧ ಸಂಬಂಧ ಜಿಲ್ಲಾಧಿಕಾರಿಗೆ ಸೂಚಿಸಲಾಗಿದ್ದು, ಸದ್ಯಕ್ಕೆ ಕುಡಿಯುವ ನೀರಿನ ಕೊರತೆ ಉಂಟಾಗಿಲ್ಲ. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು.

Join Whatsapp