Home ಕರಾವಳಿ ಚುನಾವಣಾ ಕಾರ್ಯಕ್ಕೆ 18ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ: ರವಿಕುಮಾರ್ ಎಂ.ಆರ್

ಚುನಾವಣಾ ಕಾರ್ಯಕ್ಕೆ 18ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ: ರವಿಕುಮಾರ್ ಎಂ.ಆರ್

ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ದ.ಕ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿಸೆಂಬರ್ 11ರಂದು ಒಪ್ಪಿಗೆ ನೀಡಿದ್ದು, ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಹಾಗೂ ರಕ್ಷಣೆ ಕಾಯ್ದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ. ಅಲ್ಲವೇ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾಯ್ದೆಯನ್ನು ಉಲ್ಲಂಘಿಸಿ 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986ರ ಅನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Join Whatsapp
Exit mobile version