PFI ಜೊತೆ RSS ಕೂಡ ಬ್ಯಾನ್ ಮಾಡಿ: ಕಾಂಗ್ರೆಸ್ ಸಂಸದ

Prasthutha|

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಕೇರಳದ ಕಾಂಗ್ರೆಸ್ ಸಂಸದ ಕೋಡಿಕುನ್ನಿಲ್ ಸುರೇಶ್ ಟೀಕಿಸಿದ್ದು, ಪಿಎಫ್ ಐ ಜೊತೆ ಆರ್ ಎಸ್ ಎಸ್ ಕೂಡ ಬ್ಯಾನ್ ಆಗಬೇಕು ಎಂದು ಆಗ್ರಹಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ರೀತಿಯಲ್ಲೇ ಆರ್ಎಸ್ಎಸ್ ಸಹ ನಿಷೇಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಕೇವಲ ಪಿಎಫ್ಐ ನಿಷೇಧಿಸುವುದೊಂದೇ ಪರಿಹಾರವಲ್ಲ. ಆರ್ಎಸ್ಎಸ್ ಕೂಡ ದೇಶದಾದ್ಯಂತ ಹಿಂದೂ ಕೋಮುವಾದವನ್ನು ಹರಡುತ್ತಿದೆ’ ಎಂದು ಹೇಳಿದರು.

Join Whatsapp