ಬಂಡಾರು ದತ್ತಾತ್ರೇಯ ಕಾರು ಅಪಘಾತ | ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರು

Prasthutha|

ಹೈದರಾಬಾದ್ : ರೋಹಿತ್ ವೆಮುಲ ಆತ್ಮಹತ್ಯೆ ಪ್ರಕರಣದಲ್ಲಿ ಭಾರೀ ವಿವಾದಕ್ಕೆ ಗುರಿಯಾಗಿದ್ದ, ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ಹೈದರಾಬಾದ್ ಸಮೀಪ ಕಾರು ಅಪಘಾತವೊಂದರಲ್ಲಿ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಚೌತುಪ್ಪಲ್ ನ ಕೈತಪುರಂ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರವೊಂದಕ್ಕೆ ಢಿಕ್ಕಿ ಹೊಡೆದಿದೆ.

- Advertisement -

ಕಾರಿನಲ್ಲಿದ್ದ ಚಾಲಕ ಮತ್ತು ಆಪ್ತ ಸಹಾಯಕ ಕೂಡ ಅಪಾಯದಿಂದ ಪಾರಾಗಿದ್ದಾರೆ. ಬಳಿಕ ದತ್ತಾತ್ರೇಯ ಬೇರೆ ಕಾರಿನಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ.  

- Advertisement -