Home ಟಾಪ್ ಸುದ್ದಿಗಳು ಬಂಡೇಮಠ ಶ್ರೀ ಆತ್ಮಹತ್ಯೆ ಪ್ರಕರಣ: ಆರೋಪಿಗಳು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಬಂಡೇಮಠ ಶ್ರೀ ಆತ್ಮಹತ್ಯೆ ಪ್ರಕರಣ: ಆರೋಪಿಗಳು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಮಾಗಡಿ ತಾಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.

ಮಾಗಡಿಯ 1ನೇ ಜೆಎಂಎಫ್ಸಿೂ ನ್ಯಾಯಾಲಯದ ನ್ಯಾಯಾಧೀಶರಾದ ಧನಲಕ್ಷ್ಮೀ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೇಳಿದ್ದರು.

ಪೊಲೀಸರ ಬೇಡಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಲು ಸಮ್ಮತಿ ನೀಡಿದ್ದಾರೆ. ನವೆಂಬರ್ 5 ರವರೆಗೂ ಆರೋಪಿಗಳು ಪೊಲೀಸರ ವಶದಲ್ಲಿದ್ದು ನಂತರ ಅವರನ್ನು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ.

ಸದ್ಯ ಮೃತ ಬಸವಲಿಂಗ ಸ್ವಾಮೀಜಿ ತಮ್ಮ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಇತರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ

Join Whatsapp
Exit mobile version