ಕರ್ನಾಟಕ ಬಂದ್: ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ

Prasthutha|

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಸ್ಯಾರ್ಗಳು ಸಹ ಬೆಂಬಲ ಸೂಚಿಸಿದ್ದಾರೆ.

- Advertisement -


ಕಾವೇರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ ಚಂದನವನದ ತಾರೆಯರು ಗುರುರಾಜ್ ಕಲ್ಯಾಣ ಮಂಟಪದಲ್ಲಿ ರೈತರಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕ ಬಂದ್ ಹಿನ್ನೆಲೆ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದಿಂದ ಪ್ರತ್ಯೇಕ ಪ್ರತಿಭಟನೆ ಕೈಗೊಳ್ಳಲಾಗಿದೆ. ಗುರುರಾಜ ಕಲ್ಯಾಣ ಮಂಟಪದ ಬಳಿ ಚಿತ್ರರಂಗ ಪ್ರತಿಭಟನೆ ಕೈಗೊಂಡಿದೆ. ಆದ್ರೆ ಚಿತ್ರರಂಗದ ಕಲಾವಿದರು ಕನ್ನಡಪರ ಸಂಘಟನೆಗಳ ಪಾದಯಾತ್ರೆಯಿಂದ ದೂರ ಉಳಿದಿದ್ದಾರೆ. ಈಗಾಗಲೇ ಹಿರಿಯ ನಟ ಉಮಾಶ್ರೀ, ನಟರಾದ ಲೂಸ್ ಮಾದ ಯೋಗಿ, ಚಿಕ್ಕಣ್ಣ, ಹಿರಿಯ ನಟ ಶ್ರೀನಾಥ್, ನಟಿಯರಾದ ಪೂಜಾಗಾಂಧಿ, ಅನು ಪ್ರಭಾಕರ್, ರೂಪಿಕಾ, ಸೇರಿದಂತೆ ಪ್ರತಿಭಟನೆಯಲ್ಲಿ ಫಿಲ್ಮ್ ಚೇಂಬರ್ ಸದಸ್ಯರು ಭಾಗಿಯಾಗಿದ್ದಾರೆ.

Join Whatsapp