ಬೆಂಗಳೂರು: ಮಹಿಳೆಯನ್ನು ಕೊಂದು ಅಲ್ಲೇ ಮಲಗಿ ನಿದ್ರೆಗೆ ಜಾರಿದ ಆರೋಪಿ

Prasthutha: December 7, 2021

ಬೆಂಗಳೂರು; ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮಹಿಳೆಯನ್ನು ಕೊಂದು ಮೃತದೇಹವನ್ನು ಮನೆಗೆ ಹೊರಗೆ ಹಾಕಿ ನಿದ್ರೆಗೆ ಜಾರಿದ ಘಟನೆ ಚಿಕ್ಕಬಳ್ಳಾಪುರದ ನಕ್ಕಲಕುಂಟೆ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.


ಕೊಲೆ ಕೃತ್ಯ ಎಸಗಿದ ನರಸಿಂಹಪ್ಪ ಎಂಬಾತನನ್ನು ನಗರ ಠಾಣೆ ಪೊಲೀಸರು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು ಆರೋಪಿ ನರಸಿಂಹಪ್ಪ ಕುಡಿದ ಅಮಲಿನಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡು ಯಾವುದೋ ವಿಷಯಕ್ಕೆ ಮನೆಯಲ್ಲಿ ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.


ಆಕ್ರೋಶಗೊಂಡ ನರಸಿಂಹಪ್ಪ ಮನೆಯಲ್ಲಿದ್ದ ಮಾರಕಾಸ್ತ್ರದಿಂದ ಮಹಿಳೆಯ ತಲೆಗೆ ಹೊಡೆದಿದ್ದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ಆಕೆಯ ಶವವನ್ನು ಮನೆಯಿಂದ ಹೊರಗೆ ಹಾಕಿ, ಒಳಗಡೆ ಬಂದು ಮಲಗಿದ್ದಾನೆ ಎಂದು ತಿಳಿದುಬಂದಿದೆ.ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!