ಬೆಂಗಳೂರು | ಅಪಾಯಕಾರಿ ಕಟ್ಟಡಗಳ ತೆರವಿಗೆ ಕಾಯ್ದೆ ತಿದ್ದುಪಡಿ: ಡಿ.ಕೆ.ಶಿವಕುಮಾರ್‌

Prasthutha|

- Advertisement -

ಬೆಂಗಳೂರು(ಅ.25): ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಮಳೆ ಅವಾಂತರ ಕುರಿತು ಗುರುವಾರ ಅಧಿಕಾರಿಗಳೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್‌ಡಿಎ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದರು.

- Advertisement -

ನಿರ್ಮಾಣ ಹಂತದ ಕಟ್ಟಡಗಳ ಬಗ್ಗೆ ಸೋಮವಾರದಿಂದಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗು ತಿದೆಯೇ ಎಂದು ಪತ್ತೆ ಮಾಡಿ ನಿರ್ಮಾಣ ತಡೆಗಟ್ಟ ಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದರು.



Join Whatsapp