ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಡೆದ ಬೆಂಗಳೂರು ಬಂದ್ ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಆದರೆ, ಬೆಂಗಳೂರು ಬಂದ್ ನಿಂದ ಸರ್ಕಾರದ ಬೊಕ್ಕಸಕ್ಕೆ ನೂರಾರು ಕೋಟಿ ರೂ. ನಷ್ಟ ಸಂಭವಿಸಿದೆ.
ವಾಣಿಜ್ಯ ಒಕ್ಕೂಟ ಎಫ್ಕೆಸಿಸಿಐ ಅಧ್ಯಕ್ಷ ಬಿ ವಿ ಗೋಪಾಲ್ ರೆಡ್ಡಿ ಅವರು ಬೆಂಗಳೂರು ಬಂದ್ನಿಂದ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಒಟ್ಟು ಆದಾಯದಲ್ಲಿ ಬೆಂಗಳೂರಿನಲ್ಲಿನ ಆದಾಯದ ಪಾಲು ಶೇ.60ರಷ್ಟಿದೆ. ಬಂದ್ನಿಂದ ವ್ಯಾಪಾರ ವಹಿವಾಟು ಸ್ಥಗಿತವಾಗಿರುವುದರಿಂದ ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿಸಿದರು.
ಬೆಂಗಳೂರು ಬಂದ್ ನಿಂದ ಜಿಎಸ್ ಟಿ ಸಂಗ್ರಹ ವ್ಯತ್ಯಯವಾಗಿದ್ದು, 10 ತಾಸಿನ ಬೆಂಗಳೂರು ಬಂದ್ ನಿಂದ ಅಂದಾಜು ಸುಮಾರು 200-250 ಕೋಟಿ ರೂ. ನಷ್ಟ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.