Home ಟಾಪ್ ಸುದ್ದಿಗಳು ಬೆಂಗಳೂರು: ಜುಲೈ 1ರಿಂದ 31ರವರೆಗೆ ಬ್ಯಾರೀಸ್ ಸೆಂಟ್ರಲ್ ಕಮಿಟಿ ಸದಸ್ಯತ್ವ ಅಭಿಯಾನ

ಬೆಂಗಳೂರು: ಜುಲೈ 1ರಿಂದ 31ರವರೆಗೆ ಬ್ಯಾರೀಸ್ ಸೆಂಟ್ರಲ್ ಕಮಿಟಿ ಸದಸ್ಯತ್ವ ಅಭಿಯಾನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯ ಬ್ಯಾರಿ ಜನರನ್ನು ಸಂಘಟಿಸುವ ಸಲುವಾಗಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಆರಂಭಿಸಲಾಗಿದ್ದು, ಜುಲೈ 1ರಿಂದ ಜುಲೈ 31ರವರೆಗೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಮಿಟಿಯ ಅಧ್ಯಕ್ಷ ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುಮಾರು ಒಂದು ಲಕ್ಷ ಬ್ಯಾರಿ ಸಮುದಾಯದ ಜನರಿದ್ದಾರೆ. ಅವರನ್ನು ಒಂದೇ ವೇದಿಕೆಗೆ ತರುವ ಉದ್ದೇಶವನ್ನು ಬ್ಯಾರೀಸ್ ಸೆಂಟ್ರಲ್ ಕಮಿಟಿ ಹೊಂದಿದೆ ಎಂದು ತಿಳಿಸಿದ್ದಾರೆ.

ಉನ್ನತ ವ್ಯಾಸಂಗಕ್ಕೆ ಬೆಂಗಳೂರಿಗೆ ಬರುವ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ನೆರವು ಒದಗಿಸುವುದು, ಉದ್ಯೋಗ, ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಬ್ಯಾರಿಗಳಿಗೆ ಅನ್ಯಾಯಕ್ಕೊಳಗಾಗುವ ಸಂದರ್ಭದಲ್ಲಿ ಕಾನೂನಾತ್ಮಕ ನೆರವು ಒದಗಿಸುವುದು, ಅಪಘಾತಕ್ಕೊಳಗಾದ ಸಂದರ್ಭದಲ್ಲಿ ನೆರವು ನೀಡುವುದು, ಸಮುದಾಯದ ಶೈಕ್ಷಣಿಕ, ಆರ್ಥಿಕ, ರಾಜಕೀಯ ಅಭಿವೃದ್ಧಿಗೆ ಶ್ರಮಿಸುವುದು ಸೇರಿದಂತೆ ಹಲವು ಧ್ಯೇಯೋದ್ದೇಶಗಳನ್ನು ಸಮಿತಿ ಹೊಂದಿದೆ ಎಂದು ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಪದಾಧಿಕಾರಿಗಳಾದ ನಾಸಿರ್ ಕೆಂಪಿ, ಬಶೀರ್ ಅಡ್ಯನಡ್ಕ ಸಲೀಮ್ ಸಿ.ಎಂ, ಸಂಶುದ್ದೀನ್ ಕುಕ್ಕಾಜೆ, ಇರ್ಷಾದ್ ಬಜಾಲ್ ಉಪಸ್ಥಿತರಿದ್ದರು.

Join Whatsapp
Exit mobile version