ಬೆಂಗಳೂರು; ದೇಶದ ಮಾಹಿತಿ ತಂತ್ರಜ್ಞಾನ ಸರಕುಗಳ ರಫ್ತಿನಲ್ಲಿ ಬೆಂಗಳೂರು ಶೇಕಡಾ 40ರಷ್ಟು ಕೊಡುಗೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಮುಖ್ಯಮಂತ್ರಿ, ದೇಶದ ಆರ್ಥಿಕತೆಯಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಪ್ರಮುಖವಾದ ಕೊಡುಗೆ ನೀಡುತ್ತಿದ್ದು, ಸರ್ಕಾರ ಅಗತ್ಯ ಪ್ರೊತ್ಸಾಹ ನೀಡುತ್ತಿದೆ ಎಂದರು.
ಜನರ ಕೈಯಲ್ಲಿ ಉದ್ಯೋಗವಿದ್ದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ, ಐಟಿ ಕ್ಷೇತ್ರದಲ್ಲಿ ಅಪಾರ ಪ್ರಮಾಣದ ಉದ್ಯೋಗಾವಕಾಶಗಳು ಲಭ್ಯವಿರುವುದಾಗಿ ತಿಳಿಸಿದರು.
ಮಾಹಿತಿ ತಂತ್ರಜ್ಞಾನ ಉದ್ಯಮದಿಂದ ಸಿಲಿಕಾನ್ ವ್ಯಾಲಿ ಎಂದು ಬೆಂಗಳೂರು ಹೆಸರುವಾಸಿಯಾಗಿದ್ದು, ಐಟಿ ಉದ್ಯಮಗಳಿಗೆ ಸರ್ಕಾರ ಒತ್ತು ನೀಡಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.