ಬೆಂಗಳೂರು: ನಗರದ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುತ್ತಿದ್ದಾರೆ.
ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಧಿಡೀರನೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಓರ್ವ ವ್ಯಕ್ತಿ ಗಿಡದ ಮೇಲೆ ಜಿಗಿದಿದ್ದು, ಗಾಯಗಳಾಗಿವೆ.
ಆತನನ್ನು ಕೊರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.